#WeatherMirror | 02-09-2023 | ದೂರವಾದ ಮಳೆ | ಕರಾವಳಿಯಲ್ಲಿ ಕೆಲವು ಕಡೆ ಮಳೆ |

September 2, 2023
6:10 PM
ಮುಂಗಾರು ದುರ್ಬಲತೆ ಮುಂದುವರಿದಿದೆ. ಕರಾವಳಿ ಕೆಲವು ಕಡೆ ತುಂತುರು ಮಳೆ ನಿರೀಕ್ಷೆ. ಮೋಡದ ವಾತಾವರಣ ಕಂಡುಬರಲಿದೆ. ಸೆ.6 ರಿಂದ ಮಳೆ ಸಾಧ್ಯತೆ.

3.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆ ಇದೆ.

ಚಾಮರಾಜನಗರ, ಮೈಸೂರು ಹಾಗೂ ಹಾಸನ ಪೂರ್ವ ಭಾಗಗಳಲ್ಲಿ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ಗದಗ, ಬಾಗಲಕೋಟೆ, ವಿಜಾಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಬೆಳಗಾವಿ, ಹಾವೇರಿ, ಧಾರವಾಡ ರಾಯಚೂರು, ಕಲಬುರ್ಗಿ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು ದುರ್ಬಲತೆ ಮುಂದುವರಿದಿದ್ದು, ಕರಾವಳಿ ಭಾಗಗಳಲ್ಲಿ ಇವತ್ತಿನಿಂದ ದಿನದಲ್ಲಿ ಮೋಡ ಕವಿದ ವಾತಾವರಣದ ಸಮಯ ಅಧಿಕವಾಗಿರಬಹುದು. ಸೆಪ್ಟೆಂಬರ್ 6ರಿಂದ ಮುಂಗಾರು ಅಲ್ಪ ಚೇತರಿಸಿಕೊಂಡು ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. ಇದೇ ಸಮಯದಲ್ಲಿ ಒಳನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror