07.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ ಇರಬಹುದು.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಕರಾವಳಿ ಭಾಗಗಳಲ್ಲಿ ಮಾತ್ರ ಸ್ವಲ್ಪ ಮಟ್ಟಿಗೆ ಮಳೆಯ ಲಕ್ಷಣಗಳಿವೆ. ಈಗಿನ ಮುನ್ಸೂಚನೆಯಂತೆ ಸೆಪ್ಟೆಂಬರ್ 6ರಿಂದ 12ರ ತನಕ ಕರಾವಳಿ ಹಾಗೂ ಕೊಡಗು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ನಂತರ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ.
ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಕಡಲ ತೀರದಲ್ಲಿ ವಾಯುಭಾರ ಕುಸಿತದಂತ ದೀರ್ಘ ತಿರುಗುವಿಕೆ ಮಾತ್ರ ಇದೆ. ವಾಯುಭಾರ ಕುಸಿತದ ಪೂರ್ವ ಹಂತ. ಅದು ಆ ಹಂತದಲ್ಲೆ ಶಿಥಿಲಗೊಳ್ಳುವ ಲಕ್ಷಣಗಳಿವೆ. ಸಧ್ಯಕ್ಕೆ ಯಾವುದೇ ವಾಯುಭಾರ ಕುಸಿತಗಳ ಲಕ್ಷಣಗಳಿಲ್ಲ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…