#WeatherMirror | 07-09-2023 | ಮುಂಗಾರು ದುರ್ಬಲತೆ ಮುಂದುವರಿಕೆ | ರಾಜ್ಯದ ಅಲ್ಲಲ್ಲಿ ಮಳೆ |

September 7, 2023
11:42 AM
ಮುಂಗಾರು ದುರ್ಬಲತೆ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಕೆಲವು ಕಡೆ ಅಲ್ಲಲ್ಲಿ ಮಳೆಯಾಗಲಿದೆ.

08.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಅಲ್ಲಲ್ಲಿ, ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಮಳೆ ಅಲ್ಲಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಬಿಸಿಲು, ಅಲ್ಲಲ್ಲಿ ಮೋಡ, ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಸೆಪ್ಟೆಂಬರ್ 12 ರಿಂದ ಕರಾವಳಿ ಭಾಗಗಳಲ್ಲಿ ಸಹ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಇದೇ ಸಮಯದಲ್ಲಿ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಪ್ರಾರಂಭವಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror