08.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಅಲ್ಲಲ್ಲಿ, ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಮಳೆ ಅಲ್ಲಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.
ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಬಿಸಿಲು, ಅಲ್ಲಲ್ಲಿ ಮೋಡ, ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಸೆಪ್ಟೆಂಬರ್ 12 ರಿಂದ ಕರಾವಳಿ ಭಾಗಗಳಲ್ಲಿ ಸಹ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಇದೇ ಸಮಯದಲ್ಲಿ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಪ್ರಾರಂಭವಾಗುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…