#WeatherMirror | 14-09-2023 | ಕರಾವಳಿ ಜಿಲ್ಲೆಯ ಹೆಚ್ಚಿನ ಕಡೆ ಮಳೆ | ವಾಯುಭಾರ ಕುಸಿತದ ಪ್ರಭಾವ ಕರಾವಳಿಯಲ್ಲಿ ಬಿರುಸಿನ ಮಳೆ ನಿರೀಕ್ಷೆ |

September 14, 2023
1:59 PM
ವಾಯುಭಾರ ಕುಸಿತದಂತಹ ತಿರುವಿಕೆಯು ಛತ್ತೀಸಘಡ, ಮಧ್ಯಪ್ರದೇಶ ಮೂಲಕ ಸೆಪ್ಟೆಂಬರ್ 16,17 ರಂದು ಮಹಾರಾಷ್ಟ್ರ ಪ್ರವೇಶಿಸಿ, 18 ರಂದು ಅರಬ್ಬಿ ಸಮುದ್ರ ಪ್ರವೇಶಿಸುವ ಲಕ್ಷಣಗಳಿವೆ.

15.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಮುನ್ಸೂಚನೆಯಂತೆ ಸಾಮಾನ್ಯ ಇದ್ದರೂ ಪಶ್ಚಿಮ ಬಂಗಾಳದ ವಾಯುಭಾರ ಕುಸಿತದಂತ ತಿರುವಿಕೆ ಪ್ರಭಾವದಿಂದ ಉತ್ತಮ ಮಳೆಯ ನಿರೀಕ್ಷೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.ಮೈಸೂರು, ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು, ಮೋಡ, ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯು ಛತ್ತೀಸಘಡ, ಮಧ್ಯಪ್ರದೇಶ ಮೂಲಕ ಸೆಪ್ಟೆಂಬರ್ 16,17 ರಂದು ಮಹಾರಾಷ್ಟ್ರ ಪ್ರವೇಶಿಸಿ, 18 ರಂದು ಅರಬ್ಬಿ ಸಮುದ್ರ ಪ್ರವೇಶಿಸುವ ಲಕ್ಷಣಗಳಿವೆ.
ಇದರ ಪರಿಣಾಮದಿಂದ ರಾಜ್ಯದ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡರೂ ಒಳನಾಡು ಭಾಗಗಳಲ್ಲಿ ಅಷ್ಟೇನು ಪರಿಣಾಮದ ಲಕ್ಷಣಗಳಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror