WeatherMirror | 15-09-2023 | ಕರಾವಳಿಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ | ಮಹಾರಾಷ್ಟ್ರ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ |

September 15, 2023
2:05 PM
ಸೆಪ್ಟೆಂಬರ್ 21ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪರಿಣಾಮ ಕಡಿಮೆಯಾಗಿ, ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಸಹ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

16.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮಲೆನಾಡು ಭಾಗಗಳಲ್ಲಿ ತುಂತುರು ಇರಬಹುದು. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು, ಕೋಲಾರ ದಕ್ಷಿಣ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಅನಿರೀಕ್ಷಿತ ಗುಡುಗು ಸಹಿತ ಮಳೆಯ ಸಾಧ್ಯತೆಯೂ ಇದೆ.

ಮಧ್ಯಪ್ರದೇಶದ ಈಗಿನ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಮಧ್ಯಪ್ರದೇಶ, ಉತ್ತರ ಮಹಾರಾಷ್ಟ್ರ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಸೆ. 16 ಹಾಗೂ 17ರಂದು ಮಹಾರಾಷ್ಟ್ರ ಹಾಗೂ ಗುಜರಾತ್ಕ ರಾವಳಿಯ ಮೂಲಕ ಸಾಕಿ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ.

Advertisement

ಸೆಪ್ಟೆಂಬರ್ 21ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪರಿಣಾಮ ಕಡಿಮೆಯಾಗಿ, ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಸಹ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |
June 24, 2025
11:51 AM
by: ಸಾಯಿಶೇಖರ್ ಕರಿಕಳ
ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ
June 24, 2025
11:32 AM
by: ದ ರೂರಲ್ ಮಿರರ್.ಕಾಂ
ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?
June 24, 2025
10:56 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ
June 24, 2025
10:45 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group