16.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮಲೆನಾಡು ಭಾಗಗಳಲ್ಲಿ ತುಂತುರು ಇರಬಹುದು. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು, ಕೋಲಾರ ದಕ್ಷಿಣ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಅನಿರೀಕ್ಷಿತ ಗುಡುಗು ಸಹಿತ ಮಳೆಯ ಸಾಧ್ಯತೆಯೂ ಇದೆ.
ಮಧ್ಯಪ್ರದೇಶದ ಈಗಿನ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಮಧ್ಯಪ್ರದೇಶ, ಉತ್ತರ ಮಹಾರಾಷ್ಟ್ರ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಸೆ. 16 ಹಾಗೂ 17ರಂದು ಮಹಾರಾಷ್ಟ್ರ ಹಾಗೂ ಗುಜರಾತ್ಕ ರಾವಳಿಯ ಮೂಲಕ ಸಾಕಿ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ.
ಸೆಪ್ಟೆಂಬರ್ 21ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪರಿಣಾಮ ಕಡಿಮೆಯಾಗಿ, ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಸಹ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…