WeatherMirror | 22-09-2023 | ರಾಜ್ಯದ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆ |

September 22, 2023
12:59 PM
ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದೆ. ಕೆಲವು ಕಡೆ ಅನಿರೀಕ್ಷಿತ ಮಳೆಯಾಗುವ ಸಾಧ್ಯತೆ ಇದೆ.

23.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ, ದಕ್ಷಿಣ ಕನ್ನಡ, ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಕೊಡಗು, ಚಿಕ್ಕಮಗಳೂರಿನ ಮೂಡಿಗೆರೆ, ಆಗುಂಬೆ, ಕುದುರೆಮುಖ, ಶೃಂಗೇರಿ, ಆಗುಂಬೆ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ದಾವಣಗೆರೆ, ಧಾರವಾಡ, ಬೆಳಗಾವಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಬಳ್ಳಾರಿ, ಕೊಪ್ಪಳ, ವಿಜಯಪುರ, ರಾಯಚೂರು ಯಾದಗಿರಿ ಜಿಲ್ಲೆಯಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.

ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.

ಸೆಪ್ಟೆಂಬರ್ 24ರ ನಂತರ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 30ರ ತನಕವೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror