WeatherMirror | 26-09-2023 | ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆ | ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭ |

September 26, 2023
1:06 PM
ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದು, ಅಕ್ಟೊಬರ್ ಮೊದಲ ವಾರದಲ್ಲಿ ಸಂಪೂರ್ಣ ಹಿಂದೆ ಸರಿಯುವ ಲಕ್ಷಣಗಳಿವೆ. ಅಕ್ಟೊಬರ್ 2ನೇ ವಾರದ ನಂತರ ಹಿಂಗಾರು ಆರಂಭವಾಗಬಹುದು.
27.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್ (ಮಹಾರಾಷ್ಟ್ರ – ಕರ್ನಾಟಕ ಗಡಿ ಭಾಗಗಳಲ್ಲಿ) ಹಾಗೂ ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಉಳಿದ ಬಹುತೇಕ ಭಾಗಗಳಲ್ಲಿ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ರಾಜ್ಯದಲ್ಲಿ ಈಗಿನ ಮಳೆಯ ವಾತಾವರಣವು ಅ. 2ನೇ ತಾರೀಕಿನವರೆಗೆ ಮುಂದುವರಿಯುವ ಲಕ್ಷಣಗಳಿವೆ ಹಾಗೂ ಉತ್ತರ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯಬಹುದು.
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದು, ಅಕ್ಟೊಬರ್ ಮೊದಲ ವಾರದಲ್ಲಿ ಸಂಪೂರ್ಣ ಹಿಂದೆ ಸರಿಯುವ ಲಕ್ಷಣಗಳಿವೆ. ಅಕ್ಟೊಬರ್ 2ನೇ ವಾರದ ನಂತರ ಹಿಂಗಾರು ಆರಂಭವಾಗಬಹುದು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |
February 1, 2025
7:07 PM
by: The Rural Mirror ಸುದ್ದಿಜಾಲ
ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror