WeatherMirror | 28-09-2023 | ಕರಾವಳಿ ಜಿಲ್ಲೆಗಳ ಹೆಚ್ಚಿನ ಕಡೆ ಮಳೆ | ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ | ಅಕ್ಟೊಬರ್ ಮೊದಲ ವಾರದಲ್ಲಿ ಸಂಪೂರ್ಣ ಹಿಂದೆ ಸರಿಯುವ ಸಾಧ್ಯತೆ |

September 28, 2023
11:19 AM
ಕರಾವಳಿ ಜಿಲ್ಲೆಯ ಹೆಚ್ಚಿನ ಕಡೆಗಳಲ್ಲಿ ಮಳೆ ಸಾಧ್ಯತೆ ಇದೆ.

29.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು, ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ತುಂತುರು ಮಳೆಯ ಮುನ್ಸೂಚನೆ ಇದೆ.

ಮೈಸೂರಿನ ಒಂದೆರಡು ಕಡೆ, ಚಾಮರಾಜನಗರ ಒಂದೆರಡು ಕಡೆ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಕಲಬುರ್ಗಿ, ಬೀದರ್ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಬಳ್ಳಾರಿ, ಹಾವೇರಿಯ ಒಂದೆರಡು ಕಡೆ, ಬೆಳಗಾವಿ ಸೇರಿದಂತೆ ಕರ್ನಾಟಕ – ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಕಡೆ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement

ಗೋವಾ ಕರಾವಳಿಯಿಂದ ಸ್ವಲ್ಪ ಮೇಲೆ ಮಲ್ವಾನ್ ಕಡಲ ತೀರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು , ಇದರ ಪ್ರಭಾವದಿಂದ ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ಸೆಪ್ಟೆಂಬರ್ 30ರಂದು ಶಿಥಿಲಗೊಳ್ಳುವ ಸಾಧ್ಯತೆ ಇದ್ದು. ಒಕ್ಟೊಬರ್ 1ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದೆ. ಜೊತೆಗೆ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಒಕ್ಟೊಬರ್ ಮೊದಲ ವಾರದಲ್ಲಿ ಸಂಪೂರ್ಣ ಹಿಂದೆ ಸರಿಯುವ ಸಾಧ್ಯತೆ ಇದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ
May 29, 2025
2:42 PM
by: ಸಾಯಿಶೇಖರ್ ಕರಿಕಳ
ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ
May 29, 2025
7:40 AM
by: The Rural Mirror ಸುದ್ದಿಜಾಲ
ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|
May 29, 2025
7:37 AM
by: ದ ರೂರಲ್ ಮಿರರ್.ಕಾಂ
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group