29.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ತುಂತುರು ಮಳೆಯ ಮುನ್ಸೂಚನೆ ಇದೆ.
ಮೈಸೂರಿನ ಒಂದೆರಡು ಕಡೆ, ಚಾಮರಾಜನಗರ ಒಂದೆರಡು ಕಡೆ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಕಲಬುರ್ಗಿ, ಬೀದರ್ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಬಳ್ಳಾರಿ, ಹಾವೇರಿಯ ಒಂದೆರಡು ಕಡೆ, ಬೆಳಗಾವಿ ಸೇರಿದಂತೆ ಕರ್ನಾಟಕ – ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಕಡೆ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಗೋವಾ ಕರಾವಳಿಯಿಂದ ಸ್ವಲ್ಪ ಮೇಲೆ ಮಲ್ವಾನ್ ಕಡಲ ತೀರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು , ಇದರ ಪ್ರಭಾವದಿಂದ ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ಸೆಪ್ಟೆಂಬರ್ 30ರಂದು ಶಿಥಿಲಗೊಳ್ಳುವ ಸಾಧ್ಯತೆ ಇದ್ದು. ಒಕ್ಟೊಬರ್ 1ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದೆ. ಜೊತೆಗೆ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಒಕ್ಟೊಬರ್ ಮೊದಲ ವಾರದಲ್ಲಿ ಸಂಪೂರ್ಣ ಹಿಂದೆ ಸರಿಯುವ ಸಾಧ್ಯತೆ ಇದೆ.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…