30.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ಮಂಗಳೂರು, ಮೂಡಬಿದರೆ, ಕಾರ್ಕಳ, ಬಂಟ್ವಾಳ, ಉಡುಪಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಉಡುಪಿ, ದಕ್ಷಿಣ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ ಒಂದೆರಡು ಕಡೆ, ವಿಜಯಪುರದ ಒಂದೆರಡು ಕಡೆ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಕಲಬುರ್ಗಿ, ಬೀದರ್ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಪ್ರಸ್ತುತ ದಕ್ಷಿಣ ಮಹಾರಾಷ್ಟ್ರ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಅಕ್ಟೊಬರ್ 1ನೇ ತಾರೀಕಿನ ಸಂಜೆ ಮಹಾರಾಷ್ಟ್ರದ ಮಲ್ವಾನ್ ಹಾಗೂ ರತ್ನಗಿರಿ ಮಧ್ಯ ಭೂಮಿಗೆ ಪ್ರವೇಶಿಸುವ ಲಕ್ಷಣಗಳಿವೆ. ಅಲ್ಲಿಯವರೆಗೆ ಕರಾವಳಿಯ ಹಲವೆಡೆ ಉತ್ತಮ ಮಳೆಯ ಮುನ್ಸೂಚನೆ ಇದೆ. ಈ ತಿರುಗುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಮತ್ತಷ್ಟು ಚುರುಕಾಗುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…