01.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಧಾರವಾಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಮಹಾರಾಷ್ಟ್ರ ಕರಾವಳಿಯಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತವು ಇವತ್ತು ಸಂಜೆ ಅಥವಾ ರಾತ್ರಿ ಮಲ್ವಾನ್ ಹಾಗೂ ರತ್ನಗಿರಿ ಮಧ್ಯ ಭೂಮಿಗೆ ಪ್ರವೇಶಿಸುವ ಸಾಧ್ಯತೆ ಇದೆ. ಅಕ್ಟೊಬರ್ 2 ರಿಂದ ರಾಜ್ಯದ ಕರಾವಳಿ ಭಾಗಗಳಿಲ್ಲಿಯೂ ಮಳೆಯ ತೀವ್ರತೆ ಕಡಿಮೆಯಾಗಿ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಚುರುಕುಗೊಳ್ಳಲಿದೆ.ಅಕ್ಟೊಬರ್ 4 ನೇ ತಾರೀಕಿನಿಂದ ಮುಂಗಾರು ಸಂಪೂರ್ಣ ಹಿಂದೆ ಸರಿಯುವ ಲಕ್ಷಣಗಳಿವೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…