03.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು – ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ – ಬೆಳಗಾವಿ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು ಹಾಗೂ ಚಿಕ್ಕಮಗಳೂರು ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ. ಶಿವಮೊಗ್ಗದ ಶಿವಮೊಗ್ಗ, ಶಿಕಾರಿಪುರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಹಿಂದೆ ಸರಿಯುವ ಕೊನೆಯ ಹಂತದಲ್ಲಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೆರಡು ದಿನ ಹೆಚ್ಚು ಮಳೆಯಾಗುವ ಲಕ್ಷಣಗಳಿವೆ. ಅಕ್ಟೊಬರ್ 8 ರ ನಂತರ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…
ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…
ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490