28.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಬಂಗಾಳಕೊಲ್ಲಿಯಲ್ಲಿ ಹಿಂಗಾರು ಮಾರುತಗಳು ಸ್ವಲ್ಪ ಬಲಗೊಳ್ಳುತ್ತಿದ್ದು, ನಾಳೆಯಿಂದ ಅಂದರೆ 28.10.2022ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಅಕ್ಟೊಬರ್ 30, 31 ರಂದು ಬಂಗಾಳಕೊಲ್ಲಿಯ ಆಂದ್ರಾ ಕರಾವಳಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆಯ ಲಕ್ಷಣಗಳಿವೆ. ಇದರಿಂದ ಹಿಂಗಾರು ಮತ್ತಷ್ಟು ಬಲಗೊಳ್ಳುವ ಸಾಧ್ಯತೆ ಇದೆ ಮತ್ತು ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಆದರೂ ಉತ್ತರ ಭಾರತದ ಕಡೆಯಿಂದ ಶುಷ್ಕ ಗಾಳಿ ಬೀಸುತ್ತಿರುವುದರಿಂದ ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel