10.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.
ಕೊಡಗು(ಉತ್ತಮ) ಚಿಕ್ಕಮಗಳೂರು( ಕುದುರೆಮುಖ, ಆಗುಂಬೆ, ಶೃಂಗೇರಿ ಭಾಗಗಳಲ್ಲಿ ಉತ್ತಮ) ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ತುಮಕೂರು ದಕ್ಷಿಣ ಭಾಗದಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಅ.12 ರ ತನಕ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಕರಾವಳಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹಾಗೂ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಘಟ್ಟ ಪ್ರದೇಶಗಳಲ್ಲಿ ಮಾತ್ರ ಮಳೆ ಸೀಮಿತಗೊಳ್ಳವ ಲಕ್ಷಣಗಳಿವೆ.
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…