WeatherMirror | 10-10-2023 | ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಹಿಂಗಾರು ಆರಂಭವಾಗುವುದು ತಡವಾಗುವ ಸಾಧ್ಯತೆ |

October 10, 2023
3:09 PM
ಗಾಳಿಯ ಒತ್ತಡ ಇಲ್ಲದ್ದರಿಂದ ಹಿಂಗಾರು ಆರಂಭವಾಗುವುದು ತಡವಾಗುವ ಸಾಧ್ಯತೆ ಹೆಚ್ಚಿದೆ.
11.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿಯ ದಕ್ಷಿಣ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ಉತ್ತರ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ದಕ್ಷಿಣ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಇನ್ನೆರಡು ದಿನಗಳಲ್ಲಿ ಈಗಿನ ಮಳೆಯ ವಾತಾವರಣ ದುರ್ಬಲಗೊಳ್ಳವ ಸಾಧ್ಯತೆಗಳಿದ್ದು,  ಕರಾವಳಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹಾಗೂ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಾತ್ರ ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದಲ್ಲಿ ಹಾಗೂ ಬಂಗಾಳಕೊಲ್ಲಿಯಲ್ಲಿ ಗಾಳಿಯ ಸಂಚಾರವು ಬಹಳ ದುರ್ಬಲಗೊಂಡಿರುವುದರಿಂದ ವಾಯುಭಾರ ಅಥವಾ ಚಂಡಮಾರುತ ಉಂಟಾಗುವ ಲಕ್ಷಣಗಳಿಲ್ಲ.ಗಾಳಿಯ ಒತ್ತಡ ಇಲ್ಲದ್ದರಿಂದ ಹಿಂಗಾರು ಆರಂಭವಾಗುವುದು ತಡವಾಗುವ ಸಾಧ್ಯತೆ ಹೆಚ್ಚಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror