#WeatherMirror | 11-10-2023 | ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಸದ್ಯ ಹಿಂಗಾರು ಆರಂಭವಾಗುವ ಲಕ್ಷಣಗಳು ಕಾಣುತ್ತಿಲ್ಲ |

October 11, 2023
11:07 AM
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಹಾಗೂ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಹೆಚ್ಚಿನ ಕಡೆಗಳಲ್ಲಿ ಮಳೆ ಸಾಧ್ಯತೆ ಇದೆ.

12.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಹಾಗೂ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿಯ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಅಕ್ಟೊಬರ್ 12ರಿಂದ ಮಳೆಯು ಕರಾವಳಿ ಹಾಗೂ ಮಲೆನಾಡು ಭಾಗಗಳಿಗೆ ಮಾತ್ರ ಸೀಮಿತವಾಗುವ ಲಕ್ಷಣಗಳಿವೆ.ಅರಬ್ಬಿ ಸಮುದ್ರದಲ್ಲಿ ಹಾಗೂ ಬಂಗಾಳಕೊಲ್ಲಿಯಲ್ಲಿ ಗಾಳಿಯ ಚಟುವಟಿಕೆಗಳು ದುರ್ಬಲಗೊಂಡಿರುವುದರಿಂದ ಸಧ್ಯಕ್ಕೆ ಹಿಂಗಾರು ಆರಂಭವಾಗುವ ಲಕ್ಷಣಗಳು ಕಾಣುತ್ತಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!
August 21, 2026
6:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror