12.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಹಾಗೂ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿಯ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಅಕ್ಟೊಬರ್ 12ರಿಂದ ಮಳೆಯು ಕರಾವಳಿ ಹಾಗೂ ಮಲೆನಾಡು ಭಾಗಗಳಿಗೆ ಮಾತ್ರ ಸೀಮಿತವಾಗುವ ಲಕ್ಷಣಗಳಿವೆ.ಅರಬ್ಬಿ ಸಮುದ್ರದಲ್ಲಿ ಹಾಗೂ ಬಂಗಾಳಕೊಲ್ಲಿಯಲ್ಲಿ ಗಾಳಿಯ ಚಟುವಟಿಕೆಗಳು ದುರ್ಬಲಗೊಂಡಿರುವುದರಿಂದ ಸಧ್ಯಕ್ಕೆ ಹಿಂಗಾರು ಆರಂಭವಾಗುವ ಲಕ್ಷಣಗಳು ಕಾಣುತ್ತಿಲ್ಲ.
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…