13.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೊಡಗು ಹೆಚ್ಚಿನ ಭಾಗಗಳಲ್ಲಿ, ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಕುದುರೆಮುಖ, ಕೊಪ್ಪ ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಮೈಸೂರು ಹಾಗೂ ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಇವತ್ತಿನಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗುವ ಲಕ್ಷಣಗಳಿವೆ.ಅಕ್ಟೊಬರ್ 13ರಿಂದ ಎರಡು ದಿನಗಳ ಕಾಲ ಕರಾವಳಿ ಭಾಗಗಳಲ್ಲಿ ಸಹ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಹಿಂಗಾರು ಆರಂಭಿಕ ಹಂತದಲ್ಲಿದ್ದು, ದುರ್ಬಲ ಹಾಗೂ ಅನಿಶ್ಚಿತತೆ ಮುಂದುವರಿಯಲಿದೆ.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…