23.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಅಕ್ಟೊಬರ್ 23ರಿಂದ ರಾಜ್ಯದ ಕರಾವಳಿ ಭಾಗಗಳಲ್ಲೂ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದಲ್ಲಿನ “ತೇಜ” ಚಂಡಮಾರುತವು ಅಕ್ಟೊಬರ್ 23ರ ರಾತ್ರಿ ದಕ್ಷಿಣ ಓಮನ್ ಕರಾವಳಿಗೆ ಅಪ್ಪಳಿಸಲಿದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಅಕ್ಟೊಬರ್ 25ರಂದು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಅಕ್ಟೊಬರ್ ತಿಂಗಳ ಕೊನೆಯವರೆಗೂ ಹಿಂಗಾರು ಚುರುಕಾಗುವ ಲಕ್ಷಣಗಳಿಲ್ಲ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…