ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಎರಡು, ಮೂರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಮಲೆನಾಡು ಭಾಗಗಳಲ್ಲಿ ಬಿಟ್ಟು ಬಿಟ್ಟು ತುಂತುರು ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಸಾಧ್ಯತೆ ಇದ್ದು. ಉಳಿದ ಕರ್ನಾಟಕ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದುರ್ಬಲ ಮುಂಗಾರು ಮುಂದುವರಿಯಲಿದೆ. ಪಶ್ಚಿಮ ಬಂಗಾಳ, ಬಾಂಗ್ಲಾ ಕರಾವಳಿ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಬಂಗ್ಲಾದೇಶ ಕಡೆ ಚಲಿಸುವ ಲಕ್ಷಣಗಳಿವೆ. ಪರಿಣಾಮವಾಗಿ ರಾಜ್ಯದ ಕರಾವಳಿ ಭಾಗದಲ್ಲಿ ಆಗಷ್ಟ್ 6ರ ತನಕ ದಿನಕ್ಕೆ ಎರಡು, ಮೂರು ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…