ಬೆಳಗಿನ ಚಳಿ ಹಾಗೂ ಹಿಮ ನೋಡಿ ಹಿರಿಯರು ಹೇಳುವುದು ಹೀಗೆ…ಮಳೆ ದೂರವಾಯ್ತಾ ?. ಕಳೆದ ಅನೇಕ ದಿನಗಳ ಮಳೆಗೆ ಕೊಂಚ ವಿರಾಮ ಸಿಕ್ಕಿದೆ. ಬುಧವಾರ ಬೆಳಗ್ಗೆ ಮಲೆನಾಡು ಭಾಗದ ಹಲವು ಕಡೆಗಳಲ್ಲಿ ಮಂಜು ಮಸುಕಿದ ವಾತಾವರಣ ಕಂಡುಬಂದಿದೆ. ಮಳೆಯೂ ಕಳೆದ ಮೂರ್ನಾಕು ದಿನಗಳಿಂದ ದೂರವಾಗಿದೆ. ಮಂಜು ಬೀಳಲು ಆರಂಭದವಾದರೆ ಮಳೆ ದೂರವಾಗುತ್ತದೆ ಎನ್ನುವುದು ಹಿರಿಯರು ಹೇಳುವ ಮಾತು, ಆದರೆ ಹವಾಮಾನ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದಂತೆ ಆಗುಂಬೆ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಕಲಬುರ್ಗಿ, ಬೀದರ್ ಹಾಗೂ ಗುಲ್ಬರ್ಗ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ತುಮಕೂರು, ಹಾಸನ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಮೊದಲಾದ ಕಡೆ ಮಳೆ ಮುನ್ಸೂಚನೆ ಇದೆ.
ಆ.27 ರ ಬಳಿಕ 30 ರವರೆಗೆ ಕೇರಳದ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…