ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಹೆಚ್ಚಾಗುತ್ತಿದೆ. ಹೀಗಾಗಿ ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯ ಭಾಗಗಳ ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿ ಮಾರ್ಚ್ 20 ರ ಬೆಳಗಿನ ವೇಳೆಗೆ ವಾಯುಭಾರ ಕುಸಿತಗಳು ಹೆಚ್ಚಾಗಿ ಮಾರ್ಚ್ 21 ರಂದು ಸೈಕ್ಲೋನಿಕ್ ಚಂಡಮಾರುತವಾಗಿ ತೀವ್ರಗೊಂಡು “ಅಸನಿ” ಚಂಡಮಾರುತ ಕಾಣಿಸಿಕೊಳ್ಳಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಬಾರಿಯ ಚಂಡಮಾರುತಕ್ಕೆ ಅಂದರೆ ವರ್ಷದ ಮೊದಲ ಚಂಡಮಾರುತಕ್ಕೆ ಶ್ರೀಲಂಕಾ ಅಸನಿ ಎಂದು ಹೆಸರಿಟ್ಟಿದೆ.
Advertisement
ಮಾರ್ಚ್ 20 ಮತ್ತು ಮಾರ್ಚ್ 21ರಂದು ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆಯಿದೆ. ಸೈಕ್ಲೋನಿಕ್ ಚಂಡಮಾರುತವು ಮಾರ್ಚ್ 22 ರವರೆಗೆ ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತದೆ. ಮಾರ್ಚ್ 23 ರಂದು ದಿಕ್ಕು ಬದಲಿಸಲಿರುವ ಚಂಡಮಾರುತ ಬಾಂಗ್ಲಾದೇಶ ಮತ್ತು ಉತ್ತರ ಮ್ಯಾನ್ಮಾರ್‌ನ ಪಕ್ಕದ ಪ್ರದೇಶಗಳ ಕಡೆ ಚಲಿಸಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾರತದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement