ನೈರುತ್ಯ ಮಾನ್ಸೂನ್ ಮಾರುತವು ನಿಧಾನವಾಗಿ ದೇಶದ ವಿವಿದೆಡೆ ತಲುಪಿದರೂ ದುರ್ಬಲವಾಗಿದೆ. ಹೀಗಾಗಿ ಮಳೆ ಆರಂಭಕ್ಕೆ ಹಿನ್ನಡೆಯಾಗಿದೆ. ಆದರೆ ಮುಂಗಾರು ಪೂರ್ವ ಮಳೆ ದೇಶದ ವಿವಿದೆಡೆ ಭರ್ಜರಿಯಾಗಿ ಸುರಿಯುತ್ತಿದೆ. ಇದೀಗ ರಾಜ್ಯದಲ್ಲಿ 4 ದಿನಗಳ ಕಾಲ ಉತ್ತಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.ಬೆಂಗಳೂರು ಹಾಗೂ ಕರಾವಳಿ ಪ್ರದೇಶದಲ್ಲಿ ಎಲ್ಲೋ ಎಲರ್ಟ್ ಘೋಷಿಸಲಾಗಿದೆ.
ನೈಋತ್ಯ ಮಾನ್ಸೂನ್ ವಾಯುವ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಈಶಾನ್ಯ ಮತ್ತು ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ಅಸ್ಸಾಂ, ಮಿಜೋರಾಂ, ಮಣಿಪುರ ಮತ್ತು ನಾಗಾಲ್ಯಾಂಡ್‌ನ ಹೆಚ್ಚಿನ ಭಾಗಗಳಿಗೆ ಮತ್ತಷ್ಟು ವಿಸ್ತರಿಸಿದೆ. ಆದರೆ ವೇಗ ಇನ್ನಷ್ಟೇ ಪಡೆದುಕೊಳ್ಳಬೇಕಿದೆ.
ಇದೀಗ ಮುಂಗಾರು ಪೂರ್ವ ಮಳೆಯಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಬೆಂಗಳೂರು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…