ಮಳೆಗಾಲ ಮರೆಯಾಗುವ ಕಾಲ ಬಂದಾಗಿದೆ. ಹಿಂಗಾರು ಮಳೆ ಸುರಿಯಬೇಕಾದ ಕಾಲ ಬಂದಾಗಿದೆ. ಆದರೆ ಈ ವರ್ಷ ಇನ್ನೂ ಮುಂಗಾರು ದೂರವಾಗಿಲ್ಲ. ಅದರಲ್ಲೂ ಕರಾವಳಿ ಪ್ರದೇಶದಲ್ಲಿ ಮಳೆಯಬ್ಬರ ಇನ್ನೂ ಇದೆ. ಹವಾಮಾನ ಇಲಾಖೆ ಪ್ರಕಾರ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸೆ.15 ರಿಂದ ಮೂರು ದಿನಗಳ ಕಾಲ ವ್ಯಾಪಕ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Advertisement
ರಾಜ್ಯದಲ್ಲಿ ಮುಂಗಾರಿನ ಅಬ್ಬರ ಕಡಿಮೆಯಾಗುತ್ತಿದೆ. ಆದರೆ ಕರಾವಳಿ ಭಾಗದಲ್ಲಿ ಇನ್ನೂ ಮುಂಗಾರು ಮಳೆ ಕಡಿಮೆಯಾಗಿಲ್ಲ. ಇದೀಗ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೆ.15 ರಿಂದ ಭಾರಿ ಮಳೆ ಮುಂದುವರಿಯಲಿದೆ. ಮಂಗಳವಾರ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕರಾವಳಿ ತೀರದಲ್ಲಿ ಗಾಳಿಯ ತೀವ್ರತೆಯೂ ಹೆಚ್ಚಿರಲಿದ್ದು ಗಂಟೆ 55 ಕಿಮೀವರೆಗೂ ಇರಬಹುದು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement