14.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಕಾಸರಗೋಡು, ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಕೊಡಗು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ತುಮಕೂರಿನ ಗುಬ್ಬಿ, ಶಿರಾ, ಚಿಕ್ಕನಾಯಕನಹಳ್ಳಿ, ಹುಳಿಯಾರು ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮಾರ್ಚ್ 16ರಿಂದ ಮಧ್ಯಪ್ರದೇಶ, ಛತ್ತೀಸಗಡ, ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ರಾಜ್ಯಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಮಾರ್ಚ್ 22 ರಿಂದ ತಮಿಳುನಾಡುಹಾಗೂ ಕೇರಳದ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಇದರೊಂದಿಗೆ ರಾಜ್ಯದ ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.