Karnataka Weather | 31-05-2024 | ಜೂನ್ 1 ರಿಂದ ಮುಂಗಾರು ರಾಜ್ಯಕ್ಕೆ ಪ್ರವೇಶ |ಮುಂಗಾರು ದುರ್ಬಲವಾಗುವ ಸಾಧ್ಯತೆ ಇದೆ ಏಕೆ..? |

May 31, 2024
2:18 PM
ಜೂನ್ 1 ರಿಂದ ಮುಂಗಾರು ರಾಜ್ಯಕ್ಕೆ ಪ್ರವೇಶಿಸಲಿದೆ.

01.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ.ಮೈಸೂರು ಹಾಗೂ ಚಾಮರಾಜನಗರ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಜೂನ್ 1 ರಿಂದ ಮುಂಗಾರು ರಾಜ್ಯಕ್ಕೆ ಪ್ರವೇಶಿಸಲಿದೆ. ಜೊತೆಗೆ ತಮಿಳುನಾಡು ಕಡೆಯಿಂದ ಬೀಸುವ ಗಾಳಿಯ ಪ್ರಭಾವದಿಂದ ಜೂನ್ 1 ಹಾಗೂ 2ನೇ ತಾರೀಕಿನಂದು ಬೆಂಗಳೂರು ಗ್ರಾಮಾಂತರ ಮತ್ತು ನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಜೂನ್ 2ರಂದು ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಭೂಮಧ್ಯ ರೇಖೆಗಿಂತ ಕೆಳಗೆ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ದುರ್ಬಲವಾಗಿ ಆರಂಭವಾಗುವ ಮುಂಗಾರು ಮತ್ತಷ್ಟು ದುರ್ಬಲಗೊಳ್ಳಲಿದೆ. ಜೂನ್ 2೦ ಅಥವಾ 25 ರ ನಂತರ ಮುಂಗಾರು ಚುರುಕಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror