10.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಜಾಸ್ತಿ ಇದ್ದರೆ, ದಕ್ಷಿಣ ಕನ್ನಡದ ಸುಳ್ಯ, ಕಡಬ ಭಾಗಗಳಲ್ಲಿ ಕಡಿಮೆ ಇರಬಹುದು. ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ. ಮಧ್ಯ ಒಂದೆರಡು ದಿನ ಕಡಿಮೆ ಇರಬಹುದು. ಇನ್ನು ಮೇಘ ಸ್ಪೋಟದಂತಹ ಮಳೆಯ ಸಾಧ್ಯತೆ ಕಡಿಮೆಯಾಗಬಹುದು.
ಮಲೆನಾಡು : ಕೊಡಗು ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಗುಡುಗು ಮಳೆಯ ಮುನ್ಸೂಚನೆ ಇದೆ. ಮಧ್ಯ ಒಂದೆರಡು ದಿನ ಕಡಿಮೆ ಇರಬಹುದು.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಗುಡುಗು ಮಳೆಯ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದ ದಕ್ಷಿಣ ಕರಾವಳಿ ಭಾಗದಲ್ಲಿ ಉಂಟಾದ ವಾಯುಭಾರ ಕುಸಿತವು ಅಕ್ಟೊಬರ್ 12 ರ ಸುಮಾರಿಗೆ ಪಶ್ಚಿಮಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ. ಅದು ಆ ಕಡೆ ಚಲಿಸುತ್ತಿದ್ದಂತೆಯೇ ರಾಜ್ಯದಲ್ಲಿ ಹಿಂಗಾರು ಆರಂಭವಾಗುವ ಸಾಧ್ಯತೆಗಳಿವೆ.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…