23.12.24ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆಯೂ ಇದೆ.
ಮಲೆನಾಡು ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಚಳಿ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ದಕ್ಷಿಣ, ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ.
ಈಗಿನಂತೆ ಡಿಸೆಂಬರ್ 27 ರ ತನಕ ರಾಜ್ಯದಾದ್ಯಂತ ಅಲ್ಲಲ್ಲಿ ಮೋಡ ಹಾಗೂ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಡಿಸೆಂಬರ್ 26ರಂದು ದಕ್ಷಿಣ ತಮಿಳುನಾಡು ತೀರದಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಹಿಂಗಾರು ರೀತಿಯ ಮಾರುತಗಳು ಬರುವುದರಿಂದ ರಾಜ್ಯದಲ್ಲಿ 2 ದಿವಸಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.