ಸುದ್ದಿಗಳು

ಹವಾಮಾನ ವರದಿ | 23-12-2024 | ಕೆಲವು ಕಡೆ ಮೋಡ-ಕೆಲವು ಕಡೆ ತುಂತುರು ಮಳೆ | ಜನವರಿಯಲ್ಲಿ ಮಳೆಯ ಲಕ್ಷಣವಿಲ್ಲ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

24.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿ ಅಲ್ಲಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಈ ವಾತಾವರಣವು ಡಿಸೆಂಬರ್ 27ರ ತನಕ ಮುಂದುವರಿದು 28ರಿಂದ ಬಿಸಿಲಿನ ಅವಧಿ ಹೆಚ್ಚಿರಬಹುದು.

ಮಲೆನಾಡು : ಮಲೆನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಡಿಸೆಂಬರ್ 27ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, 28 ರಿಂದ ಒಣಹವೆ ಆವರಿಸುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 26 ಹಾಗೂ 27ರಂದು ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿದ್ದು, 28ರಿಂದ ಒಣಹವೆ ಆವರಿಸುವ ಲಕ್ಷಣಗಳಿವೆ.

Advertisement

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಡಿ.26 ರಂದು ತಮಿಳುನಾಡು ಕರಾವಳಿಯ ಬಳಿ ಶಿಥಿಲಗೊಳ್ಳುತ್ತಿದ್ದಂತೆಯೇ ಹಿಂಗಾರು ರೀತಿಯ ಗಾಳಿಯ ಚಲನೆಯಿಂದ ರಾಜ್ಯದಲ್ಲಿ ಡಿಸೆಂಬರ್ 26  ರಿಂದ 2 ದಿವಸಗಳ ಕಾಲ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಚಳಿಯ ಪ್ರಮಾಣವು ಹೆಚ್ಚಾಗುವ ಸಾಧ್ಯತೆಗಳಿದ್ದು ಒಣಹವೆ ಆವರಿಸುವ ಲಕ್ಷಣಗಳಿವೆ.
2025 ರ ಜನವರಿಯಲ್ಲಿ ಮಳೆಯ ಲಕ್ಷಣಗಳಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

11 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

11 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

12 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

12 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

12 hours ago