13.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದಾದ್ಯಂತ ಚಳಿ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣವು ಕಡಿಮೆಯಾಗಿದ್ದು, ಸಂಜೆ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಜನವರಿ 14 ರಂದು ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಡುಪಿ ಮೋಡ ಮಾತ್ರ ಇರಬಹುದು. ಆಮೇಲೆ 2 ದಿನಗಳ ಕಾಲ ಸ್ವಲ್ಪ ಮೋಡದ ವಾತಾವರಣದ ಸಾಧ್ಯತೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನದ ಒಂದೆರಡು ಕಡೆ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಜನವರಿ 14ರಂದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ನಂತರ 2 ದಿವಸಗಳ ಕಾಲ ಸ್ವಲ್ಪ ಮೋಡದ ವಾತಾವರಣ ಇರಬಹುದು.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಛಳಿ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಜನವರಿ 13ರಂದು ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ದಕ್ಷಿಣ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಆಮೇಲೆ ಮುಂದಿನ 2 ಅಥವಾ 3 ದಿನಗಳ ಕಾಲ ಸ್ವಲ್ಪ ಮೋಡದ ವಾತಾವರಣ ಇರಬಹುದು.
ಶ್ರೀಲಂಕಾ ಬಳಿಯ ತಿರುವಿಕೆಯ ಪರಿಣಾಮದಿಂದ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ ಚಳಿ ಕಡಿಮೆಯಾಗಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ವಾತಾವರಣ ಸೃಷ್ಠಿಯಾಗಿದೆ.
ಕನ್ನಡ ಭಾಷೆಯ ಅನೇಕ ಪದಗಳು ಸಂಸ್ಕೃತ ಮೂಲದ್ದಾಗಿವೆ. ಕನ್ನಡ ನಾಡಿನ ಊರಿನ ಹೆಸರುಗಳೂ…
ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆಯು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಈ ಜೀವ ವೈವಿಧ್ಯತೆಯನ್ನು…
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಸೇರಿ ಮಲೆನಾಡು ಭಾಗದಲ್ಲಿ ಉಂಟಾಗುತ್ತಿರುವ ಕಾಡಾನೆಗಳ…
ತುಮಕೂರಿನಲ್ಲಿ ಸ್ವದೇಶಿ ಜಾಗರಣ ಮಂಚ್ ಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಕೇಂದ್ರ ಜಲಶಕ್ತಿ ಹಾಗೂ…
ಆಹಾರೋತ್ಪಾದನೆಯ ಕ್ಷೇತ್ರದಲ್ಲಿ ಹಾಲಿ ಉತ್ಪಾದನೆಯ ಪಾತ್ರ ಅತ್ಯಂತ ಪ್ರಮುಖವಾಗಿದೆ. ಭಾರತದಲ್ಲಿ ಆಹಾರ ಪದಾರ್ಥಗಳಿಗಾಗಿ…
ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಹೆಚ್ಚುವರಿ…