28.02.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ಆದರೂ ಫೆಬ್ರವರಿ ಮಾರ್ಚ್ 1 ರಿಂದ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ವಾತಾವರಣದಲ್ಲಿ ತೇವಾಂಶ ಕೊರತೆಯಿಂದ ಹಾಗೂ ರಾತ್ರಿ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ಆದರೂ ಮಾರ್ಚ್ 1 ರಿಂದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಫೆಬ್ರವರಿ 28ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್ 3ರಿಂದ ಮತ್ತೆ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಶ್ರೀಲಂಕಾ ದಕ್ಷಿಣ ಕರಾವಳಿಗೆ ತಲಪಿರುವ ತಿರುಗುವಿಕೆಯು ಅರಬ್ಬಿ ಸಮುದ್ರ ಕಡೆಗೆ ಸಾಗಿ ಶಿಥಿಲಗೊಳ್ಳುವ ಲಕ್ಷಣಗಳಿವೆ.