16.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಇಲ್ಲಿ ಗಾಳಿಯ ಪಾತ್ರ ಮಹತ್ವದ ಪಾತ್ರ ವಹಿಸಲಿದೆ. ಈಗಿನಂತೆ ಎಪ್ರಿಲ್ 19ರ ತನಕ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಕಾಣಿಸುತ್ತಿಲ್ಲ. ಎ.20 ರಿಂದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಸಕಲೇಶಪುರ ಸುತ್ತಮುತ್ತ ತುಂತುರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಬಾಳೆಹೊನ್ನೂರು, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಎಪ್ರಿಲ್ 16 ರಿಂದ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿದ್ದರೂ ಉತ್ತಮ ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಎಪ್ರಿಲ್ 19 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.
ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡಿನಲ್ಲೂ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಎಪ್ರಿಲ್ 19 ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಎಪ್ರಿಲ್ 21 ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.
ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್‌ಗಳನ್ನು ಮಹಾರಾಷ್ಟ್ರದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…
ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕೇಂದ್ರ…
ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…