Advertisement
ವೆದರ್ ಮಿರರ್

ಹವಾಮಾನ ವರದಿ | 18.04.2025 | ಕೆಲವು ಸೀಮಿತ ಪ್ರದೇಶದಲ್ಲಿ ಮಳೆ | ಎ.21ರಿಂದ ಮಳೆ ಹೆಚ್ಚಾಗುವ ಸಾಧ್ಯತೆ

Share
19.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಕೆಲವು ಸೀಮಿತ ಪ್ರದೇಶಗಳಲ್ಲಿ ಸಂಜೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಈಗಿನಂತೆ ಎ. 21ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.  ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಗಾಳಿಯ ಪ್ರಮಾಣ ಹೆಚ್ಚಿದ್ದರೆ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.  ಈಗಿನಂತೆ ಮಲೆನಾಡು ಭಾಗಗಳಲ್ಲಿ ಸಂಜೆಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಧಾರವಾಡ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದ್ದು, ಪ್ರಮಾಣ ಹೆಚ್ಚಿದ್ದರೆ, ಕೊಪ್ಪಳ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.
ದಕ್ಷಿಣ ಒಳನಾಡಿನ ಚಿತ್ರದುರ್ಗ ಉತ್ತರ, ತುಮಕೂರಿನ ಪಾವಗಢ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಆಂದ್ರ ಗಡಿ ಭಾಗಗಳ ಅಲ್ಲಲ್ಲಿ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಕೆಲವು ಸೀಮಿತ ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಹೆಚ್ಚು ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆಗಳು ಕಡಿಮೆಯಾಗುತ್ತಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

9 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

14 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

18 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

22 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago