23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಖೆಯೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ರಾತ್ರಿ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ತುಂತುರು ಮಳೆಯ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯ ಪ್ರಭಾವ ಹೆಚ್ಚಿದ್ದರೆ ಇತರ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಈಗಿನಂತೆ ಎ. 25ರ ವರೆಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು 26ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಎ. 26ರಿಂದ ಮಳೆಯ ಪ್ರಮಾಣವು ಹೆಚ್ಚಾಗುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಎ.26ರಿಂದ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಸಾಧ್ಯತೆಗಳಿವೆ. ಅಲ್ಲಿಯ ತನಕ ಕೆಲವು ಸೀಮಿತ ಪ್ರದೇಶಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.