ಹವಾಮಾನ ವರದಿ | 02.11.2025 | ರಾಜ್ಯದ ಕೆಲವೆಡೆ ಮತ್ತೆ ಮಳೆ ಮುನ್ಸೂಚನೆ…?

November 2, 2025
3:48 PM

03.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ನ. 5 ಅಥವಾ 6 ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನ.5ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.

ಉತ್ತರ ಒಳನಾಡು : ಉತ್ತರ ಒಳನಾಡಿನ ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ನ. 3 ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 6ರ ತನಕ ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇವತ್ತು ಗುಜರಾತ್ ಕರಾವಳಿ ದಾಟಲಿದ್ದು ಶಿಥಿಲಗೊಳ್ಳುವ ಸಾಧ್ಯತೆಗಳಿವೆ.
ಇದರ ಪರಿಣಾಮದಿಂದ ರಾಜ್ಯದಲ್ಲಿ ಮುಂದಿನ 5 ರಿಂದ 6 ದಿನಗಳ ತನಕ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror