ಹವಾಮಾನ ವರದಿ | 03.11.2025| ಅಲ್ಲಲ್ಲಿ ಮಳೆ ಸಾಧ್ಯತೆ | ಕಾರಣ ಏನು..?

November 3, 2025
1:44 PM

 

04.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ನ. 6ರಿಂದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಳೆಯ ಮುನ್ಸೂಚನೆ ಒಂದೊಂದೇ ದಿನ ಮುಂದೆ ಸರಿಯುತ್ತಿದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ನ. 6ರಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ  ಆರಂಭವಾಗುವ ಸಾಧ್ಯತೆಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನ ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ದಕ್ಷಿಣ ಒಳನಾಡಿನ ಅಲ್ಲಲ್ಲಿ ನ. 4ರಿಂದ ಸಾಮಾನ್ಯ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

ರಾಜ್ಯದಲ್ಲಿ ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ಸಮುದ್ರದ ಗಾಳಿಯ ಪರಿಣಾಮದಿಂದ ಹಗಲಿನ ಉಷ್ಣಾಂಶವೂ ಕೊಂಚ ಏರಿಕೆಯಾಗಬಹುದು.
ಆದರೆ ಉತ್ತರ ಭಾರತದ ಕಡೆಯಿಂದ ಛಳಿ ಗಾಳಿಯು ಬೀಸಲು ಆರಂಭವಾದರೆ ಮಳೆಯ ಸಾಧ್ಯತೆ ಕಡಿಮೆಯಾಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror