04.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ನ. 6ರಿಂದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಳೆಯ ಮುನ್ಸೂಚನೆ ಒಂದೊಂದೇ ದಿನ ಮುಂದೆ ಸರಿಯುತ್ತಿದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ನ. 6ರಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನ ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ದಕ್ಷಿಣ ಒಳನಾಡಿನ ಅಲ್ಲಲ್ಲಿ ನ. 4ರಿಂದ ಸಾಮಾನ್ಯ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ರಾಜ್ಯದಲ್ಲಿ ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ಸಮುದ್ರದ ಗಾಳಿಯ ಪರಿಣಾಮದಿಂದ ಹಗಲಿನ ಉಷ್ಣಾಂಶವೂ ಕೊಂಚ ಏರಿಕೆಯಾಗಬಹುದು.
ಆದರೆ ಉತ್ತರ ಭಾರತದ ಕಡೆಯಿಂದ ಛಳಿ ಗಾಳಿಯು ಬೀಸಲು ಆರಂಭವಾದರೆ ಮಳೆಯ ಸಾಧ್ಯತೆ ಕಡಿಮೆಯಾಗಬಹುದು.
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…