Advertisement
ವೆದರ್ ಮಿರರ್

ಹವಾಮಾನ ವರದಿ | 04.11.2025 | ನ.6ರಿಂದ ಅಲ್ಲಲ್ಲಿ ಮಳೆ…?

Share

05.11.225ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಾಗಲೇ ಮುಂಜಾನೆ ಉಡುಪಿ ಜಿಲ್ಲೆಯ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗಿದೆ. ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಈ ಮೋಡದ ವಾತಾವರಣವು ಮುಂದುವರಿಯಲಿದ್ದು, ನ. 6 ರಿಂದ ಮೂರು ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ನ. 6ರಿಂದ ಮೂರು ದಿನಗಳ ಕಾಲ ಮಲೆನಾಡು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡು : ಉತ್ತರ ಒಳನಾಡಿನ ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ನ. 8ರ ತನಕ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ.

ದಕ್ಷಿಣ ಒಳನಾಡು : ದಕ್ಷಿಣ ಒಳನಾಡಿನ ಚಿತ್ರದುರ್ಗ, ತುಮಕೂರು (ಪಾವಗಢ ಸಹಿತ), ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಪೂರ್ವ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ನ. 8ರ ತನಕ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

6 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago