Advertisement
ವೆದರ್ ಮಿರರ್

ಹವಾಮಾನ ವರದಿ | 06.11.2025 | ರಾಜ್ಯದಲ್ಲಿ ಮಳೆ ಕಡಿಮೆಯಾಗುವ ಸೂಚನೆ.. ಚಳಿ ನಿರೀಕ್ಷೆ

Share

07.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದ್ದು ಛಳಿಯ ವಾತಾವರಣ ಹೆಚ್ಚಾಗುವ ನಿರೀಕ್ಷೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡ, ತುಂತುರು ಮಳೆಯ ಮುನ್ಸೂಚನೆ ಇದ್ದರೂ, ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶೀತ ಗಾಳಿಯು ಪ್ರಭಾವದಿಂದ ಮೋಡ ಮಾತ್ರ ಇರಬಹುದು.
ಈಗಿನಂತೆ ಮಲೆನಾಡು ಜಿಲ್ಲೆಗಳಲ್ಲಿ ನ. 7ರಂದು ಮಾತ್ರ ಮಳೆಯ ಮುನ್ಸೂಚನೆ ಇದೆ. ನಂತರ ಛಳಿ ಹಾಗೂ ಒಣ ಹವೆ ಮುಂದುವರಿಯಲಿದೆ.

ಉತ್ತರ ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ನ. 7ರ ನಂತರ ಉತ್ತರ ಒಳನಾಡಿನಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿವೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಆದರೆ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಛಳಿ ಗಾಳಿಯು ಪ್ರಭಾವದಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.
ಈಗಿನಂತೆ ನ.8ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

ಫಿಲಿಪ್ಪೀನ್ಸ್ ಕರಾವಳಿಯ ಪ್ರಭಲ ಚಂಡಮಾರುತದ ಪರಿಣಾಮ ಬಂಗಾಳಕೊಲ್ಲಿಯ ಗಾಳಿಯು ಆ ಕಡೆಗೆ ಸೆಳೆಯಲ್ಪಡುವುದರಿಂದ ಹಿಂಗಾರು ಅಂತ್ಯಗೊಂಡಂತಿದೆ. ಉತ್ತರ ಭಾರತದ ಹಿಮಾಲಯ ಕಡೆಯಿಂದ ಬೀಸುತ್ತಿರುವ ಶೀತ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ ಛಳಿಯ ವಾತಾವರಣವು ಹೆಚ್ಚಾಗುವ ನಿರೀಕ್ಷೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

29 minutes ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

1 hour ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

2 hours ago

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

3 hours ago

ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ- ಸಚಿವ ಜಾರ್ಜ್ ಸ್ಪಷ್ಟನೆ

ಕರ್ನಾಟಕದಲ್ಲಿ ಸದ್ಯಕ್ಕೆ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಗೊಳಿಸುವ ಯಾವುದೇ ನಿರ್ಧಾರ ಸರ್ಕಾರದ ಮುಂದಿಲ್ಲ…

4 hours ago

ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು

ಸೂಪರ್ ಎಲ್ ನಿನೋದಿಂದ 2027ರ ಫೆಬ್ರವರಿವರೆಗೆ ಸಾಮಾನ್ಯ ವರ್ಷಕ್ಕಿಂತ 4.51 ಲಕ್ಷ ತಾಪಮಾನ…

4 hours ago