Advertisement
ವೆದರ್ ಮಿರರ್

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

Share

10.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಜಿಲ್ಲೆಗಳಲ್ಲಿ ಮಧ್ಯಾಹ್ನದ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಆಗಸ್ಟ್ 12 ರ ತನಕ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಗಳಿದ್ದು, 13 ರಿಂದ ಒಂದೆರಡು ಮಳೆ ಹೆಚ್ಚಾಗುವ ನಿರೀಕ್ಷೆ ಇದೆ. ಆಗಷ್ಟ್ 14 ಅಥವಾ 15ರಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ( ಈಗ ತಮಿಳುನಾಡು ಕರಾವಳಿ ಸಮೀಪ ಇದೆ) ಮುಂಗಾರು ಸ್ವಲ್ಪ ಚುರುಕಾಗುವ ಸೂಚನೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು. ಈಗಿನಂತೆ ಆಗಸ್ಟ್ 10 ರಿಂದ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಆಗಸ್ಟ್ 15 ಅಥವಾ 16 ರಿಂದ ಮುಂಗಾರು ಸ್ವಲ್ಪ ಚುರುಕಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯನಗರ, ದಾವಣಗೆರೆ, ಬಳ್ಳಾರಿ, ರಾಯಚೂರು, ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಹೆಚ್ಚು ಮಳೆಯ ಮುನ್ಸೂಚನೆ ಇದೆ), ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೋಲಾರ ಜಿಲ್ಲೆಯಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಈಗಿನಂತೆ ಆಗಸ್ಟ್ 10ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆ ಆಗುವ ಸೂಚನೆಗಳಿವೆ.

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ ಚಲಿಸುತ್ತಿದ್ದಂತೆಯೇ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

7 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago