31.01.2025 ಹಾಗೂ 01.02.2025ರ ಕರ್ನಾಟಕದ ಹವಾಮಾನ ಮುನ್ಸೂಚನೆ:
ಜನವರಿ 31 ರಂದು ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ತಮಿಳುನಾಡು ಹಾಗೂ ಕರ್ನಾಟಕ ಗಡಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಫೆಬ್ರವರಿ 1 ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಬೆಳ್ತಂಗಡಿ, ಕಾರ್ಕಳ ಸುತ್ತಮುತ್ತ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಮಲೆನಾಡು ಪ್ರದೇಶಗಳಾದ ಕೊಡಗು ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಹಾಸನದಲ್ಲಿ ಮೋಡದ ವಾತಾವರಣ ಇರಲಿದ್ದು, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಳೆ ಸ್ವಲ್ಪ ಜೋರಿರುವ ಸಾಧ್ಯತೆಗಳಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡ ಮಾತ್ರ ಇರಬಹುದು.
ಫೆಬ್ರವರಿ 2 ರಿಂದ ರಾಜ್ಯದಾದ್ಯಂತ ಮತ್ತೆ ಎಂದಿನಂತೆ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ಚಳಿಯ ಪ್ರಮಾಣವು ಸ್ವಲ್ಪ ಮಟ್ಟಿಗೆ ಕಡಿಮೆಯಾಗುವ ಸಾಧ್ಯತೆಗಳಿವೆ. ಈ ಮಳೆಯು ಬಂಗಾಳಕೊಲ್ಲಿಯಲ್ಲಿ ಗಾಳಿಯ ಸಂಚಾರದಲ್ಲಿ ಆಗುತ್ತಿರುವ ಬದಲಾವಣೆಯ ಕಾರಣದಿಂದ ಇರಬಹುದು.
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…
ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…
ಪಡಿತರ ಚೀಟಿಗೆ ಆಧಾರ್ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…
ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…
ಎಥೆನಾಲ್ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…