ಹವಾಮಾನ ಬದಲಾವಣೆ ಏನಾಗುತ್ತಿದೆ… ?| ಮಳೆ ಇದೆಯಾ..? ತಾಪಮಾನ ಅಧಿಕವೇ..? | ಫೆಬ್ರವರಿ ತಿಂಗಳ ಹವಾಮಾನ ವರದಿ ಹೀಗಿದೆ |

February 19, 2025
6:53 AM
ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಕಾಣಿಸುತ್ತಿದೆ.ಲಾ ನಿನಾ ಪರಿಣಾಮ ಇರುವುದರಿಂದ ಮಾರ್ಚ್ ತಿಂಗಳ ಕೊನೆಯಲ್ಲಿ ರಾಜ್ಯದಲ್ಲಿ ಬೇಸಿಗೆ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಈಗಾಗಲೇ ರಾಜ್ಯದ ಅಲ್ಲಲ್ಲಿ ಮೋಡದ ವಾತಾವರಣ ಉಂಟಾಗುತ್ತಿದ್ದು, ಹಗಲಿನ ಉಷ್ಣಾಂಶವೂ ಏರಿಕೆಯಾಗುತ್ತಿದೆ. ಫೆಬ್ರವರಿ 20 ನಂತರ ಆಗ್ನೇಯ ಶ್ರೀಲಂಕಾ ಸಮೀಪ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗುವ ಲಕ್ಷಣಗಳಿರುವುದರಿಂದ ಈಗ ಬಂಗಾಳಕೊಲ್ಲಿಯಲ್ಲಿ ಬೀಸುತ್ತಿರುವ ಗಾಳಿಯ ದಿಕ್ಕು ಬದಲಾಗುವ ಸಾಧ್ಯತೆಗಳಿವೆ. ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ರಾತ್ರಿಯ ವೇಳೆ ಸಹಿತ ಉಷ್ಣಾಂಶ ಮತ್ತು ವಾತಾವರಣದ ತೇವಾಂಶ ಸ್ವಲ್ಪ ಮಟ್ಟಿಗೆ ಏರಿಕೆಯಾಗುವ ಸಾಧ್ಯತೆಗಳಿವೆ.……… ಮುಂದೆ ಓದಿ…….

Advertisement

ಆದರೆ, ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆಗಳಿಲ್ಲದಿದ್ದರೂ, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಕಾಣಿಸುತ್ತಿದೆ. ಹೆಚ್ಚಿನ ಭಾಗಗಳಲ್ಲಿ ದಟ್ಟ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಬಹುದು. ಫೆಬ್ರವರಿ 25 ರಿಂದ ತಿರುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಉಷ್ಣಾಂಶವೂ ಸ್ವಲ್ಪ ಮಟ್ಟಿಗೆ ತಗ್ಗಬಹುದು ಮತ್ತು ಬಿಸಿಲಿನ ವಾತಾವರಣ ಮುಂದುವರಿಯಬಹುದು. ಲಾ ನಿನಾ ಪರಿಣಾಮ ಇರುವುದರಿಂದ ಮಾರ್ಚ್ ತಿಂಗಳ ಕೊನೆಯಲ್ಲಿ ರಾಜ್ಯದಲ್ಲಿ ಬೇಸಿಗೆ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror