15.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಹನಿ ಮಳೆಯ ಸಾಧ್ಯತೆಯೂ ಇದೆ. ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ರಾಮನಗರ ಹಾಗೂ ಬೆಂಗಳೂರು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮಾರ್ಚ್ 16ರಿಂದ 19ರ ತನಕ ಮಧ್ಯಪ್ರದೇಶ, ಛತ್ತೀಸಗಡ, ಒಡಿಶಾ, ಉತ್ತರ ಆಂದ್ರಾ, ತೆಲಂಗಾಣ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಾರ್ಚ್ 20ರಿಂದ ತಮಿಳುನಾಡು, ಕೇರಳ ಭಾಗದಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಮಾರ್ಚ್ 22 ರಿಂದ ಕರ್ನಾಟಕದ ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ…
ಲಡಾಖ್ನ ದ್ರಾಸುದಲ್ಲಿಂದು 26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…
ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…