ಮಳೆ ಸುರಿಯುವ ವಾತಾವರಣ, ಕರಾವಳಿಯಲ್ಲಿ ಬಿಸಿಗಾಳಿಯ ಎಚ್ಚರಿಕೆ

March 10, 2023
12:28 PM

ಎಲ್ಲೆಲ್ಲೂ ಬಿಸಿಲೋ ಬಿಸಿಲು! ಈ ಧಗೆಯನ್ನು ತಡೆಯೋಕೆ ಸಾಧ್ಯವೇ ಇಲ್ಲ ಎಂಬಷ್ಟು ಮೈಸುಡುವ ಬಿಸಿಲು ಎಲ್ರನ್ನೂ ಸುಸ್ತು ಮಾಡಿಸಿದೆ. ಇದರ ಜೊತೆಗೆ ಕರ್ನಾಟಕದ ಈ ನಗರದಲ್ಲಿ ಇಡೀ ದೇಶದಲ್ಲೇ ಹೆಚ್ಚು ಉಷ್ಣಾಂಶ ದಾಖಲಾದ ಸುದ್ದಿ ಹೊರಬಿದ್ದಿದೆ.

ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಬಿಸಿಗಾಳಿ ಬೀಸುವ ಗಂಭೀರ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಪ್ರದೇಶಗಳಲ್ಲಿ ಸೆಖೆ ದಿನೇ ದಿನೇ ಹೆಚ್ಚುತ್ತಿದ್ದರೆ ಬೆಂಗಳೂರಿನ ಹವಾಮಾನ ಆಶ್ವರ್ಯ ಹುಟ್ಟಿಸುವಂತಿದೆ.

ಬೆಂಗಳೂರು ನಗರ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದೆ. ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮಳೆ ಸುರಿಯುವ ವಾತಾವರಣವೂ ನಿರ್ಮಾಣವಾಗಿದೆ.

ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿ ಬೀಸುವ ಎಚ್ಚರಿಕೆಯನ್ನು ಸಹ ಹವಾಮಾನ ಇಲಾಖೆ ನೀಡಿದೆ. ಇಡೀ ದೇಶದಲ್ಲೇ ಮಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ಮಾರ್ಚ್ 8ರಂದು ಕರ್ನಾಟಕದ ಕರಾವಳಿ ನಗರದಲ್ಲಿ ಬರೋಬ್ಬರಿ 38.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಅಂದಹಾಗೆ ಮಂಗಳೂರಿನಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚಿನ ತಾಪಮಾನ ದಾಖಲಾಗಿರುವುದು ಇದೇ ಮೊದಲೇನೂ ಅಲ್ಲ. ಈ ಮುನ್ನವೇ ಮಂಗಳೂರಿನಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾಗಿತ್ತು. ಮುಂದಿನ ದಿನಗಳಲ್ಲಿ ಮಂಗಳೂರಿನ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಸುಮಾರು ಎರಡರಿಂದ ಮೂರು ಡಿಗ್ರಿಗಳಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದೆ ಎಂದು Iಒಆ ಎಚ್ಚರಿಕೆ ನೀಡಿದೆ.

ಮಂಗಳೂರಿನಲ್ಲಿ ಮಾರ್ಚ್ 8ರಂದು ದಾಖಲಾದ ತಾಪಮಾನವು 2010 ರ ನಂತರ ದಾಖಲಾದ ಅತಿ ಹೆಚ್ಚಿನ ಉಷ್ಣಾಂಶವಾಗಿದೆ. 2017 ರಲ್ಲಿ ಮಂಗಳೂರಿನಲ್ಲಿ 37.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ
September 29, 2026
11:33 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ
September 28, 2026
11:34 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror