ಎಲ್ಲೆಲ್ಲೂ ಬಿಸಿಲೋ ಬಿಸಿಲು! ಈ ಧಗೆಯನ್ನು ತಡೆಯೋಕೆ ಸಾಧ್ಯವೇ ಇಲ್ಲ ಎಂಬಷ್ಟು ಮೈಸುಡುವ ಬಿಸಿಲು ಎಲ್ರನ್ನೂ ಸುಸ್ತು ಮಾಡಿಸಿದೆ. ಇದರ ಜೊತೆಗೆ ಕರ್ನಾಟಕದ ಈ ನಗರದಲ್ಲಿ ಇಡೀ ದೇಶದಲ್ಲೇ ಹೆಚ್ಚು ಉಷ್ಣಾಂಶ ದಾಖಲಾದ ಸುದ್ದಿ ಹೊರಬಿದ್ದಿದೆ.
ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಬಿಸಿಗಾಳಿ ಬೀಸುವ ಗಂಭೀರ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಪ್ರದೇಶಗಳಲ್ಲಿ ಸೆಖೆ ದಿನೇ ದಿನೇ ಹೆಚ್ಚುತ್ತಿದ್ದರೆ ಬೆಂಗಳೂರಿನ ಹವಾಮಾನ ಆಶ್ವರ್ಯ ಹುಟ್ಟಿಸುವಂತಿದೆ.
ಬೆಂಗಳೂರು ನಗರ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದೆ. ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮಳೆ ಸುರಿಯುವ ವಾತಾವರಣವೂ ನಿರ್ಮಾಣವಾಗಿದೆ.
ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿ ಬೀಸುವ ಎಚ್ಚರಿಕೆಯನ್ನು ಸಹ ಹವಾಮಾನ ಇಲಾಖೆ ನೀಡಿದೆ. ಇಡೀ ದೇಶದಲ್ಲೇ ಮಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ಮಾರ್ಚ್ 8ರಂದು ಕರ್ನಾಟಕದ ಕರಾವಳಿ ನಗರದಲ್ಲಿ ಬರೋಬ್ಬರಿ 38.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಅಂದಹಾಗೆ ಮಂಗಳೂರಿನಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚಿನ ತಾಪಮಾನ ದಾಖಲಾಗಿರುವುದು ಇದೇ ಮೊದಲೇನೂ ಅಲ್ಲ. ಈ ಮುನ್ನವೇ ಮಂಗಳೂರಿನಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾಗಿತ್ತು. ಮುಂದಿನ ದಿನಗಳಲ್ಲಿ ಮಂಗಳೂರಿನ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಸುಮಾರು ಎರಡರಿಂದ ಮೂರು ಡಿಗ್ರಿಗಳಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದೆ ಎಂದು Iಒಆ ಎಚ್ಚರಿಕೆ ನೀಡಿದೆ.
ಮಂಗಳೂರಿನಲ್ಲಿ ಮಾರ್ಚ್ 8ರಂದು ದಾಖಲಾದ ತಾಪಮಾನವು 2010 ರ ನಂತರ ದಾಖಲಾದ ಅತಿ ಹೆಚ್ಚಿನ ಉಷ್ಣಾಂಶವಾಗಿದೆ. 2017 ರಲ್ಲಿ ಮಂಗಳೂರಿನಲ್ಲಿ 37.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…