24.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ ಸಂಜೆ ಅಥವಾ ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ನ.25ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲು ಹಾಗೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸುತ್ತಮುತ್ತ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ನ.25ರಿಂದ ಒಣ ಹವೆ ಆವರಿಸುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ಗದಗ ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದ್ದು, ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನ. 25ರಿಂದ ಮಳೆ ಕಡಿಮೆಯಾಗಿ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ನ.26ರಂದು ಬಂಗಾಳಕೊಲ್ಲಿ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಗೊಂಡು ಉತ್ತರಾಭಿಮುಖವಾಗಿ ಚಲಿಸುವ ಸೂಚನೆಗಳಿವೆ. ಇದರೊಂದಿಗೆ ಈಗಿನ ಹಿಂಗಾರು ಮಾರುತಗಳು ಹಿಂದೆ ಸರಿಯುವ ಪ್ರಕ್ರಿಯೆ ಚುರುಕುಗೊಳ್ಳಬಹುದು. ನಂತರದ ದಿನಗಳಲ್ಲಿ ರಾಜ್ಯದಲ್ಲಿ ಛಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…
ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…
ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…
ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…