ಹವಾಮಾನ ವರದಿ | 26.11.2025 | ಏನಾಯ್ತು ಚಂಡಮಾರುತ..? ಹಿಂಗಾರು ಮಳೆ – ಚಳಿ ಆರಂಭವಾಯಿತೇ..?

November 26, 2025
11:36 AM

27.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಬಂಗಾಳಕೊಲ್ಲಿಯ ಥೈಲ್ಯಾಂಡ್, ಮಲೇಶಿಯಾ ಪಶ್ಚಿಮ ತೀರದ ವಾಯುಭಾರ ಕುಸಿತವು ಉತ್ತರ ಸುಮಾತ್ರ ತಲುಪಿದ್ದು, ಅಲ್ಲಿಯೇ ಶಿಥಿಲಗೊಳ್ಳುವ ಲಕ್ಷಣಗಳಿವೆ. ಆದರೆ ಶ್ರೀಲಂಕಾ ದಕ್ಷಿಣ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಗೊಂಡು, ಉತ್ತರಕ್ಕೆ ಚಲಿಸುವ ಸಾಧ್ಯತೆಗಳಿವೆ. ಈಗಿನಂತೆ ತಮಿಳುನಾಡು, ಆಂಧ್ರಪ್ರದೇಶ ಕರಾವಳಿ ತೀರದ ಮೂಲಕ ಸಾಗಿ ಒಡಿಸ್ಸಾ ಕರಾವಳಿಯಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.

ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನ. 29 ಮತ್ತು 30 ರಂದು ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಬಹುದು.

ಡಿ.1 ರಿಂದ ರಾಜ್ಯದಾದ್ಯಂತ ಒಣ ಹವೆ ಹಾಗೂ ದಿನಕಳೆದಂತೆ ಛಳಿಯ ಪ್ರಮಾಣವು ಹೆಚ್ಚಾಗುವ ಸಾಧ್ಯತೆಗಳಿವೆ. ಇದರೊಂದಿಗೆ ಹಿಂಗಾರು ಕೊನೆಗೊಳ್ಳಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror