27.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಬಂಗಾಳಕೊಲ್ಲಿಯ ಥೈಲ್ಯಾಂಡ್, ಮಲೇಶಿಯಾ ಪಶ್ಚಿಮ ತೀರದ ವಾಯುಭಾರ ಕುಸಿತವು ಉತ್ತರ ಸುಮಾತ್ರ ತಲುಪಿದ್ದು, ಅಲ್ಲಿಯೇ ಶಿಥಿಲಗೊಳ್ಳುವ ಲಕ್ಷಣಗಳಿವೆ. ಆದರೆ ಶ್ರೀಲಂಕಾ ದಕ್ಷಿಣ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಗೊಂಡು, ಉತ್ತರಕ್ಕೆ ಚಲಿಸುವ ಸಾಧ್ಯತೆಗಳಿವೆ. ಈಗಿನಂತೆ ತಮಿಳುನಾಡು, ಆಂಧ್ರಪ್ರದೇಶ ಕರಾವಳಿ ತೀರದ ಮೂಲಕ ಸಾಗಿ ಒಡಿಸ್ಸಾ ಕರಾವಳಿಯಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನ. 29 ಮತ್ತು 30 ರಂದು ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಬಹುದು.
ಡಿ.1 ರಿಂದ ರಾಜ್ಯದಾದ್ಯಂತ ಒಣ ಹವೆ ಹಾಗೂ ದಿನಕಳೆದಂತೆ ಛಳಿಯ ಪ್ರಮಾಣವು ಹೆಚ್ಚಾಗುವ ಸಾಧ್ಯತೆಗಳಿವೆ. ಇದರೊಂದಿಗೆ ಹಿಂಗಾರು ಕೊನೆಗೊಳ್ಳಬಹುದು.ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…